Famous Basavanna vachanas, ಬಸವಣ್ಣನವರ ವಚನಗಳು, small vachanas by Basavanna, Top 50 Kannada moral teachings, Small Basavanna Vachanagalu in Kannada, Basavanna philosophy, vachanas for life lessons, Kannada literature, wisdom of Basavanna, Basavanna sayings, top vachanas in Kannada, cultural heritage of Karnataka, spiritual teachings of Basavanna, ethical sayings in Kannada, vachanas about equality, Basavanna’s impact on society, Top 50 vachanas | ಬಸವಣ್ಣನವರ ವಚನಗಳು.
ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ. ತಂದೆ: ಮಾದರಸ, ತಾಯಿ: ಮಾದಲಂಬಿಕೆ. ಬಸವಣ್ಣ ಅಥವಾ ಬಸವೇಶ್ವರ ೧೨ನೇ ಶತಮಾನದ ಭಾರತದ ಪ್ರಸಿದ್ಧ ಕನ್ನಡ ತತ್ವಜ್ಞಾನಿ, ಕಲಚೂರಿ ಅರಸನ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದು, ಅವರು ಪ್ರಮುಖ ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿ ಎಂಬ ಹೆಗ್ಗಳಿಕೆಯನ್ನು ಗಳಿಸಿದರು. ಬಸವಣ್ಣ ವಚನಗಳ ಮೂಲಕ ಸಮಾಜದಲ್ಲಿ ಅರಿವು ಮೂಡಿಸಿದರು; ಅವರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು ಮತ್ತು ಇಷ್ಟಲಿಂಗವನ್ನು ಪರಿಚಯಿಸಿದರು. ಶಿವನ ಭಕ್ತಿ ಎಂದರೆ ಒಂದು ನಿರಂತರ ಜ್ಞಾಪನೆ ಎಂಬ ಉದ್ದೇಶದಿಂದ ಇಷ್ಟಲಿಂಗವನ್ನು ಎಲ್ಲರು ಧರಿಸಿ ಪೂಜಿಸಬಹುದಾಗಿದೆ ಎಂದು ಹೇಳಿದರು. ತಮ್ಮ ಸಾಮ್ರಾಜ್ಯದ ಮುಖ್ಯಮಂತ್ರಿಯಾಗಿ ಅನುಭವ ಮಂಟಪ (ಅಥವಾ, “ಆಧ್ಯಾತ್ಮಿಕ ಅನುಭವದ ಭವನ”) ಎಂಬ ಜಾಗವನ್ನು ಸ್ಥಾಪಿಸಿದರು, ಅಲ್ಲಿ ಎಲ್ಲಾ ವರ್ಗದ ಪುರುಷ ಮತ್ತು ಮಹಿಳೆಯರು ಆಧ್ಯಾತ್ಮಿಕ ಮತ್ತು ಪ್ರಾಪಂಚಿಕ ವಿಷಯಗಳನ್ನು ಮುಕ್ತವಾಗಿ ಚರ್ಚಿಸಲು ಅವಕಾಶವಿತ್ತು. ಬಸವಣ್ಣನವರ ಜೊತೆ ೭೭೦ ಅಮರಗಣಂಗಳು ಮತ್ತು ೧,೯೬,೦೦೦ ಶರಣರಿದ್ದರು ಎಂಬ ಐತಿಹಾಸಿಕ ಪುರಾವೆಗಳಿವೆ.
Top 50 Small Basavanna Vachanagalu in Kannada | ಬಸವಣ್ಣನವರ ವಚನಗಳು
1. ಎನ್ನಿಂದ ಕಿರಿಯರಿಲ್ಲ, ಶಿವಭಕ್ತರಿಂದ ಹಿರಿಯರಿಲ್ಲ.
ನಿಮ್ಮ ಪಾದ ಸಾಕ್ಷಿ, ಎನ್ನ ಮನ ಸಾಕ್ಷಿ.
ಕೂಡಲಸಂಗಮದೇವಾ, ಎನಗಿದೇ ದಿಬ್ಯ.
2. ಅಹಂಕಾರ ಮನವನಿಂಬುಗೊಂಡಲ್ಲಿ ಲಿಂಗ ತಾನೆಲ್ಲಿಪ್ಪುದೊ
ಅಹಂಕಾರಕ್ಕೆ ಎಡೆಗೊಡದೆ ಲಿಂಗತನುವಾಗಿರಬೇಕು.
ಅಹಂಕಾರರಹಿತವಾದಲ್ಲಿ ಸನ್ನಹಿತ ಕಾಣಾ
ಕೂಡಲಸಂಗಮದೇವ.
3. ಅಂಕವೋಡಿದಡೆ ತೆತ್ತಿಗಂಗೆ ಭಂಗವಯ್ಯಾ,
ಕಾದಿ ಗೆಲಿಸಯ್ಯಾ ಎನ್ನನು.
ಕಾದಿ ಗೆಲಿಸಯ್ಯಾ ಕೂಡಲಸಂಗಮದೇವಯ್ಯಾ,
ಎನ್ನ ತನು ಮನ ಧನದಲ್ಲಿ ವಂಚನೆಯಿಲ್ಲದೆ.
For Listening Click Here
Basavanna Vachanagalu in Kannada with Meaning
4. ಅಹುದಹುದು;
ಕೆರೆಯ ತಪ್ಪಿ ಬಾವಿಯ ಬಿದ್ದಂತೆ,
ಮುಳ್ಳ ಕಳೆದು ದಸಿಯ ಬೆಟ್ಟಿದಂತೆ,
ಬದುಕಿದ ಹಕ್ಕಿಯ ಕಿಚ್ಚಿನೊಳಗಿಕ್ಕುವರೆ,
ಕೂಡಲಸಂಗಮದೇವಾ
5. ಅಂಗದ ಮೇಲಣ ಲಿಂಗ ಹಿಂಗಿ ಬಂದ ಸುಖವನಾರಿಗರ್ಪಿಸುವೆ
ಹಿಂಗಲಾಗದು, ಭಕ್ತಿಪಥಕ್ಕೆ ಸಲ್ಲದಾಗಿ,
ಹಿಂಗಲಾಗದು, ಶರಣಪಥಕ್ಕೆ ಸಲ್ಲದಾಗಿ,
ಕೂಡಲಸಂಗಮದೇವರ ಹಿಂಗಿ ನುಂಗಿದುಗುಳು ಕಿಲ್ಬಿಷ.
6. ಅಹುದೆಂದರಿಯೆ, ಆಗದೆಂದರಿಯೆ,
ಆದಿಪಥವ ತೋರಲರಿಯೆ,
ಸತ್ಯವನರಿಯೆ, ಸಹಜವನರಿಯೆ,
ಸಜ್ಜನ ಶುದ್ಧವ ಮುನ್ನರಿಯೆ.
ನಿಮ್ಮ ಶರಣರ ಒಕ್ಕುದನುಂಡಿಪ್ಪೆ
ಕೂಡಲಸಂಗಮದೇವಾ.
7. ಎನ್ನ ತನುವಿಡಿದವರ ತನುವ ಬೆರೆಸುವೆನು,
ಎನ್ನ ಮನವಿಡಿದವರ ಮನವ ಬೆರೆಸುವೆನು,
ಎನ್ನ ಶಿರವನವರ ಪಾದಕ್ಕೆ ಪೂಜೆಯ ಮಾಡುವೆನು.
ಕೂಡಲಸಂಗನ ಶರಣರನು
ಒಡಗೊಂಡು ಬಂದೆನ್ನ ಭವವ ಹರಿವೆನು.
8. ಎನ್ನ ನಡೆಯೊಂದು ಪರಿ, ಎನ್ನ ನುಡಿಯೊಂದು ಪರಿ,
ಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯಾ.
ನುಡಿಗೆ ತಕ್ಕ ನಡೆಯ ಕಂಡಡೆ
ಕೂಡಲಸಂಗಮದೇವನೊಳಗಿಪ್ಪನಯ್ಯಾ.
9. ಆ ಕರಿಯಾಕೃತಿಯ ಸೂಕರನ ಹೋಲಿಸಿದಡೆ
ಆ ಕರಿಯಾಗಲರಿವುದೆ
ಭೂನಾಗನಾಕೃತಿಯನು ವ್ಯಾಳೇಶನ ಹೋಲಿಸಿದಡೆ
ವ್ಯಾಳೇಶನಾಗಲರಿವುದೆ
ನಾನು ಭಕ್ತನಾದಡೇನಯ್ಯಾ,
ನಮ್ಮ ಕೂಡಲಸಂಗಮದೇವನ ಸದ್ಭಕ್ತರ ಹೋಲಲರಿವೆನೆ
10. ಆ ಮಿಹಿಲಾಳು ಭೋಜ ದೇವುಲಾಳು.
ಆನು ಸೂಳೆ, ನಮ್ಮಕ್ಕ ಸೂಳೆ.
ಬೆಳ್ಳಿಗೆಯಾವಿನ ಕರುವೆಂದಡೆ ಬಳ್ಳವಾಲ ಕರೆವುದೆ
ಕೂಡಲಸಂಗನ ಶರಣರ ಮುಂದೆ ನಾನು ಕಾದಿಹೆ, ಬಾ ಬಿಸಿಲೆ.
11. ಅಂಗಯ್ಯ ಒಳಗಣ ಲಿಂಗವ ನೋಡುತ್ತ,
ಕಂಗಳು ಕಡೆಗೋಡಿವರಿಯುತ್ತ ಸುರಿಯುತ್ತ ಎಂದಿಪ್ಪೆನೊ
ನೋಟವೆ ಪ್ರಾಣವಾಗಿ ಎಂದಿಪ್ಪೆನೊ
ಕೂಟವೇ ಪ್ರಾಣವಾಗಿ ಎಂದಿಪ್ಪೆನೊ
ಎನ್ನ ಅಂಗವಿಕಾರದ ಸಂಗವಳಿದು,
ಕೂಡಲಸಂಗಯ್ಯಾ, ಲಿಂಗ ಲಿಂಗವೆನುತ್ತ.
12. ಆಗದ ಕಾಲಕ್ಕೆ ಆಗೆಂದಡಾಗದು,
ಆಗಬೇಕೆಂದು ನಾ ಬೆಂಬೀಳೆನಯ್ಯಾ.
ಆಗುಮಾಡುವ ತಂದೆ ನೀನು,
ಆಡಿ ಬಹ ಮಕ್ಕಳಿಗೆ ಊಡುವ ತಾಯಂತೆ ನೋಡಿ
ಸಲಹೆನ್ನ ಕೂಡಲಸಂಗಮದೇವಾ.
13. ಎನ್ನ ಭಕ್ತಿಯ ಶಕ್ತಿಯು ನೀನೆ,
ಎನ್ನ ಯುಕ್ತಿಯ ಶಕ್ತಿಯು ನೀನೆ,
ಎನ್ನ ಮುಕ್ತಿಯ ಶಕ್ತಿಯು ನೀನೆ.
ಎನ್ನ ಮಹಾಘನದ ನಿಲವಿನ ಪ್ರಭೆಯನುಟ್ಟು
ತಳವೆಳಗಾದ ಸ್ವಯಜ್ಞಾನಿ
ಕೂಡಲಸಂಗಯ್ಯನಲ್ಲಿ ಮಹಾದೇವಿಯಕ್ಕಗಳ ನಿಲವ
ಮಡಿವಾಳನಿಂದರಿದು ಬದುಕಿದೆನಯ್ಯಾ, ಪ್ರಭುವೆ.
14. ಎನ್ನ ಮನದಲ್ಲಿ ಮತ್ತೊಂದನರಿಯೆನಯ್ಯಾ,
ಓಂ ನಮಃ ಶಿವಾಯ, ಓಂ ನಮಃ ಶಿವಾಯ
ಎನಗಿದೆ ಮಂತ್ರ, ಇದೇ ಜಪ.
ಕೂಡಲಸಂಗಮದೇವಾ ನೀನೆ ಬಲ್ಲೆ, ಎಲೆ ಲಿಂಗವೆ.
15. ಎನ್ನ ಮನವೆಂಬ ಮರ್ಕಟನು ತನುವಿಕಾರವೆಂಬ ಅಲ್ಪಸುಖದಾಸೆಗಾಡಿ,
ವೃಥಾ ಭ್ರಮೆಗೊಂಡು, ನಾನಾ ದೆಸೆಗೆ ಲಂಘಿಸಿ
ಅಳಲಿಸಿ ಬಳಲಿಸುತ್ತಿದೆ ನೋಡಾ !
ಕೂಡಲಸಂಗಮದೇವರೆಂಬ ಕಲ್ಪವೃಕ್ಷಕ್ಕೆ ಲಂಘಿಸಿ
ಅಪರಿಮಿತದ ಸುಖವನೈದದು, ನೋಡಾ.
16. ಆಚಾರವರಿುರಿ, ವಿಚಾರವರಿುರಿ
ಜಂಗಮಸ್ಥಲ ಲಿಂಗ ಕಾಣಿರಯ್ಯಾ.
ಜಾತಿಭೇದವಿಲ್ಲ, ಸೂತಕವಿಲ್ಲ, ಅಜಾತಂಗೆ ಕುಲವಿಲ್ಲ.
ನುಡಿದಂತೆ ನಡೆಯದಿದ್ದಡೆ
ಕೂಡಲಸಂಗಯ್ಯ ಮೆಚ್ಚ ಕಾಣಿರಯ್ಯಾ.
17. ಅಂಜದಿರಂಜದಿರು ಹಂದೆ, ಓಡದಿರು ಓಡದಿರು ಹೇಡಿ,
ಆಳಿನಾಳು ಕೀಳಾಳು ಬಹರೆ
ಹೋಗದಿರು, ಹೋಗದಿರು, ಕೂಡಲಸಂಗಮದೇವಾ.
18. ಆಡಿ ಅಳುಪದಿರಾ, ಲೇಸಮಾಡಿ ಮರುಗದಿರಾ, ಎಲೆ ಮನವೆ.
ಕೂಡಿ ತಪ್ಪದಿರಾ, ಬೇಡಿದವರಿಗಿಲ್ಲೆನ್ನದಿರು ಕಂಡಾ.
ನಾಡ ಮಾತು ಬೇಡ, ಸೆರಗೊಡ್ಡಿ ಬೇಡು
ಕೂಡಲಸಂಗನ ಶರಣರ.
19. ಎನ್ನ ವಾಮ-ಕ್ಷೇಮ ನಿಮ್ಮದಯ್ಯಾ,
ಎನ್ನ ಹಾನಿ-ವೃದ್ಧಿ ನಿಮ್ಮದಯ್ಯಾ,
ಎನ್ನ ಮಾನಾಪಮಾನವೂ ನಿಮ್ಮದಯ್ಯಾ,
ಬಳ್ಳಿಗೆ ಕಾಯಿ ದಿಮ್ಮಿತ್ತೆ, ಕೂಡಲಸಂಗಮದೇವಾ.
20. ಅಂಜದಿರು ಅಳುಕದಿರು,
ಅಂಜದಿರು ಅಳುಕದಿರು, ಕುಂದದಿರು ಕುಸಿಯದಿರು.
ಏನೊ ಎಂತೊ ಎಂದು ಚಿಂತಿಸದಿರು,
ನಿನ್ನ ನಾನೇನುವನೂ ಬೇಡೆ, ಕೂಡಲಸಂಗಮದೇವಾ.
Download PDF
21. ಆಡಿದಡೇನು, ಹಾಡಿದಡೇನು, ಓದಿದಡೇನು ತ್ರಿವಿಧದಾಸೋಹವಿಲ್ಲದನ್ನಕ್ಕರಿ
ಆಡದೆ ನವಿಲು ಹಾಡದೆ ತಂತಿ ಓದದೆ ಗಿಳಿ
ಭಕ್ತಿುಲ್ಲದವರನೊಲ್ಲ ಕೂಡಲಸಂಗಮದೇವ.
22. ಆತ್ಮ ಲಿಂಗ, ಪರಮಾತ್ಮ ಜಂಗಮ,
ತನು ಮಧ್ಯೆ ಪ್ರಸಾದವಾಯಿತ್ತು,
ನಿಶ್ಚಿಂತ ನಿವಾಸವಾಯಿತ್ತು.
ಕೂಡಲಸಂಗನ ಶರಣರ ಸಂಗದಿಂದ
ನಿಶ್ಚಿಂತ ನಿವಾಸವಾಯಿತ್ತು.
23. ಅಂದು ಇಂದು ಮತ್ತೊಂದೆನಬೇಡ,
ದಿನವಿಂದೇ `ಶಿವ ಶರಣೆಂ’ಬವಂಗೆ,
ದಿನವಿಂದೇ ‘ಹರ ಶರಣೆಂ’ಬವಂಗೆ,
ದಿನವಿಂದೇ ನಮ್ಮ ಕೂಡಲಸಂಗನ ಮಾಣದೆ ನೆನೆವಂಗೆ.
24. ಆತ್ಮನ ಸುಳುಹು ನಿಂದ ಮತ್ತೆ
ಕಾಯದ ಅವತಾರವಳಿಯಿತ್ತು.
ನೀನೆಂಬ ಭಾವವರತಲ್ಲಿ,
ಕೂಡಲಸಂಗಮದೇವರ ಭಾವ
ಪ್ರಭುದೇವರಲ್ಲಿ ಐಕ್ಯವಾಯಿತ್ತು.
25. ಎನ್ನವರೆನಗೊಲಿದು ಹೊನ್ನಶೂಲವನಿಕ್ಕಿದರಯ್ಯಾ.
ಅಹಂಕಾರಪೂರಾಯ ಘಾಯದಲ್ಲಿ
ಆನೆಂತು ಬದುಕುವೆನೆಂತು ಜೀವಿಸುವೆ
ಜಂಗಮವಾಗಿ ಬಂದು ಜರೆದು, ಸೂಲವನಿಳುಹಿ,
ಪ್ರಸಾದದ ಮದ್ದನಿಕ್ಕಿ,
ಸಲಹು ಕೂಡಲಸಂಗಮದೇವಾ.
26. ಆದಿ ಅನಾದಿಗಳಿಲ್ಲದಂದು, ಸದಾಶಿವನಿಲ್ಲದಂದು,
ಶಿವನಿಲ್ಲದಂದು, ಏನೆಂಬುದೇನು ತಾನಿಲ್ಲದಂದು,
ಕೂಡಲಸಂಗಯ್ಯ ತನ್ನ ತಾನೇನೆಂದು ಅರಿಯನಂದು.
27. ಎನ್ನ ಚಿತ್ತವು ಅತ್ತಿಯ ಹಣ್ಣು, ನೋಡಯ್ಯಾ,
ವಿಚಾರಿಸಿದಡೆ ಏನೂ ಹುರುಳಿಲ್ಲಯ್ಯಾ.
ಪ್ರಪಂಚಿನ ಡಂಬಿನಲ್ಲಿ ಎನ್ನನೊಂದು ರೂಪುಮಾಡಿ ನೀವಿರಿಸಿದಿರಿ,
ಕೂಡಲಸಂಗಮದೇವಾ.
28. ಆದಿ ಲಿಂಗ, ಅನಾದಿ ಜಂಗಮವು,
ಆ ಜಂಗಮಕ್ಕೆ ಮಾಡಿದಡೆ ಪರಮಾನಂದ ಸುಖವಯ್ಯಾ.
ಗುರುವಿಂಗೆ ಪರಮಗುರು ಜಂಗಮವೆಂದುದು
ಕೂಡಲಸಂಗಯ್ಯನ ವಚನ.
29. ಎಮ್ಮಯ್ಯನ ಬಲ್ಲವರು ಒಮ್ಮೆಯೂ ಅರ್ಪಿಸರು,
ಅವರರ್ಪಿಸುವನ್ನಬರ ಎಮ್ಮಯ್ಯ ಸುಮ್ಮನಿರನು.
ಬೆಂದ ಬಿಸಿಯಾರಿದಡೆ ಪ್ರಾಣೇಶನೊಲ್ಲ,
ಕೂಡಲಸಂಗಮದೇವನುಪಚಾರದರ್ಪಿತವನೋಗಡಿಸುವ.
30. ಒಂದುವನರಿಯದ ಸಂದೇಹಿ ನಾನಯ್ಯಾ,
ನಂಬುಗೆುಲ್ಲದ ಡಂಬಕ ನಾನಯ್ಯಾ,
ನಿಮ್ಮ ನಂಬಿದ ಶರಣರ ಡಿಂಗರಿಗ ನಾನು,
ಕೂಡಲಸಂಗಮದೇವಾ.
Basaveshwara Vachanagalu in Kannada
31. ಒಲೆಯ ಬೂದಿಯ ಬಿಲಿಯಲು ಬೇಡ,
ಒಲಿದಂತೆ ಹೂಸಿಕೊಂಡಿಪ್ಪುದು.
ಹೂಸಿ ಏನು ಫಲ, ಮನದಲ್ಲಿ ಲೇಸಿಲ್ಲದನ್ನಕ್ಕ
ಒಂದನಾಡಹೋಗಿ ಒಂಬತ್ತನಾಡುವ ಡಂಬಕರ ಮೆಚ್ಚ
ಕೂಡಲಸಂಗಯ್ಯ.
32. ಓಡದಿರು, ಓಡದಿರು ನಿನ್ನ ಬೇಡುವಾತ ನಾನಲ್ಲ ಶಿವನೆ,
ನೋಡುವೆನು ಕಣ್ಣ ತುಂಬ, ಆಡಿ ಪಾಡಿ ನಲಿದಾಡುವೆ.
ಬೇಡೆನ್ನ ಕೂಡೆ ಮಾತಾಡಲಾಗದೆ, ಎಲೆ ಶಿವನೆ.
ಕೂಡಲಸಂಗಮದೇವಾ, ನೀನಾಡಿಸುವ ಬೊಂಬೆ ನಾನು.
33. ಕಂಡ ಕನಸು ನಿಧಾನವ ಕಂಡೆನಯ್ಯಾ,
ಬಿಡಲಾರದ ನಿಧಾನವ ಕಂಡೆನಯ್ಯಾ,
ಕೂಡಲಸಂಗಯ್ಯನೆಂಬ ನಿಧಾನವ ಕಂಡು
ಬಿಡಲಾರೆನಯ್ಯಾ.
34. ಕಂಡ ಭಕ್ತರಿಗೆ ಕೈಮುಗಿಯುವಾತನೆ ಭಕ್ತ,
ಮೃದುವಚನವೆ ಸಕಲ ಜಪಂಗಳಯ್ಯಾ,
ಮೃದುವಚನವೆ ಸಕಲ ತಪಂಗಳಯ್ಯಾ,
ಸದುವಿನಯವೆ ಸದಾಶಿವನ ಒಲುಮೆಯಯ್ಯಾ.
ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ.
34. ಉತ್ತಮ ಮಧ್ಯಮ ಕನಿಷ್ಟವೆಂದು, ಬಂದ ಜಂಗಮವನೆಂದೆನಾದಡೆ
ನೊಂದೆನಯ್ಯಾ, ಬೆಂದೆಯಯ್ಯಾ, ಎನ್ನ ಕಿಚ್ಚು ಎನ್ನ ಸುಟ್ಟಿತ್ತು.
ಸುಖಿಜಂಗಮ, ಸಾಮಾನ್ಯಜಂಗಮ ಉಂಟೆ,
ಕೂಡಲಸಂಗಮದೇವಾ
35. ಉಪಮಿಸಬಾರದ ಉಪಮಾತೀತರು,
ಕಾಲಕರ್ಮರಹಿತರು, ಭವವಿರಹಿತರು,
ಕೂಡಲಸಂಗಮದೇವಾ, ನಿಮ್ಮ ಶರಣರು.
36. ಕಟ್ಟಿ ಬಿಡುವನೆ ಶರಣನು ಬಿಟ್ಟು ಹಿಡಿವನೆ ಶರಣನು
ನಡೆದು ತಪ್ಪುವನೆ ಶರಣನು ನುಡಿದು ಹುಸಿವನೆ ಶರಣರನು
ಸಜ್ಜನಿಕೆ ತಪ್ಪಿದಡೆ, ಕೂಡಲಸಂಗಯ್ಯ ಮೂಗ ಹಲುದೋರೆ ಕೊಯ್ವ.
37. ಎಂತಕ್ಕೆ ಎಂತಕ್ಕೆ
ಹಡೆದ ಕಾಯ ಬೀಯವಾಗದ ಮುನ್ನ ಅಟ್ಟುಣ್ಣು ಓ !
ಬೆರಣಿಯುಳ್ಳಲ್ಲಿ ಹೊತ್ತು ಹೋಗದ ಮುನ್ನ ಅಟ್ಟುಣ್ಣು ಓ !
ಮರಳಿ ಭವಕ್ಕೆ ಬಾಹೆ, ಬಾರದಿಹೆ,
ಕರ್ತು ಕೂಡಲಸಂಗಂಗೆ ಶರಣೆನ್ನು ಓ !
38. ಎನಗಾರೂ ಇಲ್ಲ, ಎನಗಾರೂ ಇಲ್ಲವೆಂಬರು.
ಬಾಣನವ ನಾನು, ಮಯೂರನವ ನಾನು,
ಕಾಳಿದಾಸನವ ನಾನು.
ಕಕ್ಕಯ್ಯ ಹಿರಿಯಯ್ಯ, ಚಿಕ್ಕಯ್ಯ ಚೆನ್ನಯ್ಯ
ಎತ್ತಿ ಮುದ್ದಾಡಿಸಿದರೆನ್ನ, ಕೂಡಲಸಂಗಯ್ಯಾ.
39. ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ,
ಮುನಿಯಬೇಡ, ಅನ್ಯರಿಗೆ ಅಸಹ್ಯಬಡಬೇಡ,
ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ.
ಇದೇ ಅಂತರಂಗಶುದ್ಧಿ, ಇದೇ ಬಹಿರಂಗಶುದ್ಧಿ
ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ.
40. ಕಾಂಚನವೆಂಬ ನಾಯ ನಚ್ಚಿ ನಿಮ್ಮ ನಾನು ಮರೆದೆನಯ್ಯಾ.
ಕಾಂಚನಕ್ಕೆ ವೇಳೆಯಲ್ಲದ ಲಿಂಗಕ್ಕೆ ವೇಳೆ[ಯ]ಲ್ಲ.
ಹಡಿಕೆಗೆ ಮಚ್ಚಿದ ಸೊಣಗ
ಅಮೃತದ ರುಚಿಯ ಬಲ್ಲುದೆ ಕೂಡಲಸಂಗಮದೇವಾ
41. ನಿಮ್ಮ ಶರಣರ ಚಮ್ಮಾವುಗೆಗೆ ಪೃಥ್ವಿ ಸಮಬಾರದು;
ಸರಿಯಲ್ಲ, ನೋಡಾ.
ಕೂಡಲಸಂಗಮದೇವಾ,
ನಿಮ್ಮ ಶರಣರ ಚಮ್ಮಾವುಗೆಗೆ !
42. ಜಗವೆಲ್ಲಾ ಅರಿಯಲು ಎನಗೊಬ್ಬ ಗಂಡನುಂಟು,
ಆನು ಮುತ್ತೈದೆ, ಆನು ನಿಟ್ಟೈದೆ.
ಕೂಡಲಸಂಗಮದೇವಯ್ಯಾನಂತಪ್ಪ ಎನಗೊಬ್ಬ ಗಂಡನುಂಟು.
43. ನಿರಹಂಭಾವದೊಳಗೆ ದಾಸೋಹದ ನಿರಹಂಕೃತಿ ನಿಷ್ಪತ್ತಿಯಾಗಿ,
ಎರಡರಿಯದೆ ನಿಜಪರಮಾನಂದದೊಳಿಪ್ಪೆನು,
ಕೂಡಲಸಂಗಯ್ಯಾ.
44. ಜನ್ಮ ಜನ್ಮಕ್ಕೆ ಹೊಗಲೀಯದೆ,
ಸೋಹಂ ಎಂದೆನಿಸದೆ ದಾಸೋಹಂ ಎಂದೆನಿಸಯ್ಯಾ.
ಲಿಂಗಜಂಗಮದ ಪ್ರಸಾದವ ತೋರಿ ಬದುಕಿಸಯ್ಯಾ
ಕೂಡಲಸಂಗಮದೇವಾ.
45. ನುಡಿದಡೆ ಮುತ್ತಿನ ಹಾರದಂತಿರಬೇಕು.
ನುಡಿದಡೆ ಮಾಣಿಕ್ಯದ ದೀಪ್ತಿಯಂತಿರಬೇಕು.
ನುಡಿದಡೆ ಸ್ಫಟಿಕದ ಸಲಾಕೆಯಂತಿರಬೇಕು.
ನುಡಿದಡೆ ಲಿಂಗ ಮೆಚ್ಚಿ ಅಹುದಹುದನಬೇಕು.
ನುಡಿಯೊಳಗಾಗಿ ನಡೆಯದಿದ್ದಡೆ,
ಕೂಡಲಸಂಗಮದೇವನೆಂತೊಲಿವನಯ್ಯಾ
Inspiring 50 Small Basavanna Vachanagalu in Kannada | ಬಸವಣ್ಣನವರ ವಚನಗಳು
46. ಜ್ಞಾನದ ಗಮನವ ಸಹಜದ ಉದಯದಲ್ಲಿ ಏನೆಂದರಿಯೆನು.
ಲಿಂಗದ ಬೆಳಗು ಒಳಕೊಂಡುದಾಗಿ ಏನೆಂದರಿಯೆನು.
ಕೂಡಲಸಂಗಮದೇವನ ಧ್ಯಾನದಿಂದ ಏನೆಂದರಿಯೆನು.
47. ತಂದೆ ನೀನು ತಾಯಿ ನೀನು, ಬಂಧು ನೀನು ಬಳಗ ನೀನು.
ನೀನಲ್ಲದೆ ಮತ್ತಾರೂ ಇಲ್ಲಯ್ಯಾ,
ಕೂಡಲಸಂಗಮದೇವಾ,
ಹಾಲಲದ್ದು, ನೀರಲದ್ದು.
48. ತನು-ಮನ-ಧನವೆಂಬ ಮೂರು ಕತ್ತಿುವೆ,
ಸಲೆ ಮೂಗಿನ ಮೇಲೆ ಅಯ್ಯಾ,
ಲಿಂಗ ಜಂಗಮಕ್ಕೆ ಮಾಡಿಹೆನೆಂಬವಂಗೆ
ಇದು ಕಾರಣ, ಕೂಡಲಸಂಗನ ಶರಣರಿಗೆ ಅಂಜಲೇಬೇಕು.
49. ತ್ರಿವಿಧ ತ್ರಿವಿಧದಲ್ಲಿ ತಪ್ಪಿದ ತಪ್ಪುಕ ನಾನಯ್ಯಾ,
ಒಮ್ಮಿಂಗೆ ಕರುಣಿಸಯ್ಯಾ.
ಇದನರಿದು ಇನ್ನು ತಪ್ಪಿದೆನಾದಡೆ
ನೀವು ಮಾಡಿತ್ತೆ ಸಲುವುದು, ಕೂಡಲಸಂಗಮದೇವಾ.
50. ಬಣ್ಣವನಿಟ್ಟು ಮೆರೆವ ಅಣ್ಣನ ಭಕ್ತಿ
ಸುಣ್ಣದ ಕಲ್ಲ ಕಟ್ಟಿ ಮಡುವ ಬಿದ್ದಂತೆ ಆಯಿತ್ತು.
ತನ್ನ [ಬಣ್ಣ ತನ್ನ ಸು]ಡುವುದು,
ತನ್ನ ಸುಡದ ಹಾಗೆ ನೆನೆಯಾ, ಕೂಡಲಸಂಗಮದೇವನ.
Basavanna vachanas, Basavanna quotes in Kannada, small vachanas by Basavanna, Kannada moral teachings, Basavanna philosophy, vachanas for life lessons, Kannada literature, wisdom of Basavanna, Basavanna sayings, top vachanas in Kannada, cultural heritage of Karnataka, spiritual teachings of Basavanna, ethical sayings in Kannada, vachanas about equality, Basavanna’s impact on society, Top 50 Small Basavanna Vachanagalu in Kannada | ಬಸವಣ್ಣನವರ ವಚನಗಳು.
FAQ for Top 50 Small Basavanna Vachanagalu in Kannada
Q1: Who is Basavanna?
A1: Basavanna was a 12th-century philosopher and statesman in India, known for his contributions to the Lingayat movement and his profound vachanas (sayings) that emphasize values such as equality, devotion, and social justice.
Q2: What are vachanas?
A2: Vachanas are short poetic expressions written in Kannada that convey moral and philosophical teachings. They often address spiritual themes and encourage ethical living.
Q3: Why are Basavanna’s vachanas significant?
A3: Basavanna’s vachanas are significant because they promote universal values, encourage critical thinking, and challenge societal norms, making them relevant even today.
Q4: Can these vachanas be used for teaching purposes?
A4: Yes, these vachanas can be used in educational settings to teach students about moral values, philosophy, and the rich cultural heritage of Karnataka.
Q5: Are there English translations available for these vachanas?
A5: Some of Basavanna’s vachanas have been translated into English, but the essence and beauty of the original Kannada may be best appreciated in its native language.
Q6: How can I incorporate Basavanna’s teachings into my life?
A6: You can incorporate Basavanna’s teachings by reflecting on the vachanas, applying their lessons in your daily life, and promoting values like equality and integrity in your interactions with others.
Q7: Where can I find more vachanas or literature related to Basavanna?
A7: You can find more vachanas and literature on Basavanna in libraries, bookstores, or online resources dedicated to Kannada literature and culture.
Q8: How often do you update your blog with new content?
A8: We regularly update our blog with new posts and collections related to Kannada literature, culture, and philosophy. Be sure to subscribe for the latest updates!